ಬಹ್ಮಾವರ: ಮಳೆಯಿಂದ ಹಾನಿಗೊಳಗಾದ ಬ್ರಹ್ಮಾವರ ತಾಲೂಕಿನ ಹಲವು ಮನೆಗಳಿಗೆ ಉಡುಪಿ ಶಾಸಕ ರಘುಪತಿ ಭಟ್ ಇವತ್ತು ಭೇಟಿ ನೀಡಿದರು.ಬ್ರಹ್ಮಾವರ ತಾಲೂಕಿನ ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಪಾಡಿಯಲ್ಲಿ ಮೊನ್ನೆ ಭಾರಿ ಗಾಳಿ ಮಳೆಗೆ ಅನೇಕ ಮನೆಗಳು ಹಾನಿಗೀಡಾಗಿದ್ದವು. ಅಂತಹ ಮನೆಗಳಿಗೆ ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾನಿಗೀಡಾದ ಮನೆಗಳಿಗೆ ಪ್ರಾಕೃತಿಕ ವಿಕೋಪದಡಿ ಗರಿಷ್ಠ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಶಾಸಕರ ಜೊತೆಗಿದ್ದರು.
Kshetra Samachara
22/04/2022 06:28 pm