ಕುಂದಾಪುರ: ಪ್ರಸ್ತುತ ಕಾಲಘಟ್ಟದಲ್ಲಿ ಆರೋಗ್ಯದ ರಕ್ಷಣೆ, ಆರೋಗ್ಯದ ಕಾಳಜಿ ಎಲ್ಲರಲ್ಲಿಯೂ ಇರಬೇಕಾಗಿದೆ. ನಾವು ಆರೋಗ್ಯವಾಗಿದ್ದರೆ ನಮ್ಮ ಕುಟುಂಬ ನೆಮ್ಮದಿಯಿಂದ ಇರಬಹುದು. ಕೇಂದ್ರ ಹಾಗೂ ರಾಜ್ಯ ಸರಕಾರ ಕೊರೊನಾ ಅನಂತರದ ಕಾಲದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಆ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರ ಕರೆಯಂತೆ ದೇಶದ ಎಲ್ಲ ತಾಲೂಕಿನಲ್ಲಿಯೂ ಈ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಕುಂದಾಪುರದ ಉಪವಿಭಾಗ ಸರಕಾರಿ ಆಸ್ಪತ್ರೆ ಆವರಣದಲ್ಲಿ 75 ನೇ ವರ್ಷದ ಸ್ವಾತಂತ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರಕಾರವು ಬಡ ವರ್ಗದ ಜನರಿಗೆ ಅನುಕೂಲವಾಗಲು ಆಯುಷ್ಮಾನ್ ಕಾರ್ಡ್‌ನಡಿ 5 ಲಕ್ಷ ರೂ. ಚಿಕಿತ್ಸೆ ವೆಚ್ಚ ನೀಡುತ್ತಿದ್ದು, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಈ ಕಾರ್ಡ್ ಮಾಡಿಸಿ, ಕಷ್ಟಕಾಲದಲ್ಲಿ ನೆರವಿಗೆ ಬರುತ್ತದೆ ಎಂದವರು ಮನವಿ ಮಾಡಿಕೊಂಡರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
Kshetra Samachara
23/04/2022 07:35 pm