ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಮಹತ್ವದ ನಿರ್ಧಾರ

ಮಂಗಳೂರು: ರಾಜ್ಯದಲ್ಲಿ 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಬೇಕೆಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೂಡುಬಿದಿರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಡೀಮ್ಡ್ ಫಾರೆಸ್ಟ್ ಕಾರಣದಿಂದ ಜನರು ತೀವ್ರ ಸಂಕಷ್ಟಕ್ಕೊಳಗಾಗಿದ್ದರು. ಆದರೆ ಯಾವುದೇ ರೀತಿಯಲ್ಲಿ ಸಮಸ್ಯೆ ಬಗೆಹರಿದಿರಲಿಲ್ಲ. ಇದೀಗ 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂ ಕೋರ್ಟ್ ಗೆ ಅಫಿಡವಿತ್ ಸಲ್ಲಿಸಿ, ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡು ಸಹಿ ಹಾಕಿ ಬಂದಿದ್ದೇನೆ ಎಂದು ತಿಳಿಸಿದರು.

ಡೀಮ್ಡ್ ಅರಣ್ಯ ಸಮಸ್ಯೆಯಂತೆಯೇ ಕುಮ್ಕಿ, ಕಾನ ಬಾಣೆ, ಸೊಪ್ಪಿನ ಬೆಟ್ಟ ಸಮಸ್ಯೆಗಳನ್ನೂ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ವಿರೋಧ ಪಕ್ಷದವರು ಬೇರೆ ಬೇರೆ ವಿಚಾರಗಳನ್ನು ಹೇಳುತ್ತಿರುತ್ತಾರೆ. ಆದರೆ ನಾನು ಅದು ಯಾವುದಕ್ಕೂ ಪ್ರತಿಕ್ರಿಯೆ ನೀಡೋಲ್ಲ. ನಾನಾಯಿತು ನನ್ನ ರಾಜ್ಯದ ಅಭಿವೃದ್ಧಿ ಕಾರ್ಯಗಳು ಆಯ್ತು ಎಂದು ಇರಲಿದ್ದೇನೆ. ನನಗೆ ಅಭಿವೃದ್ಧಿ ಕೆಲಸ ಮಾಡಲು ದಿನದ 24 ಗಂಟೆಯೂ ಸಾಲುವುದಿಲ್ಲ. ಹಾಗಿರುವಾಗ ಸರಿ ತಪ್ಪು ಏನು ತೀರ್ಮಾನ ಕೈಗೊಳ್ಳಲಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

Edited By :
PublicNext

PublicNext

28/04/2022 07:55 am

Cinque Terre

53.02 K

Cinque Terre

2

ಸಂಬಂಧಿತ ಸುದ್ದಿ