ಉಡುಪಿ: ಇಂಧನ ,ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಇಂದು ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ.ಬೆಳಿಗ್ಗೆ ಸಚಿವರು ಪ್ರವಾಸಿ ಮಂದಿರಕ್ಕೆ ಆಗಮಿಸಿ ಅಹವಾಲು ಸ್ವೀಕಾರ ಮಾಡಿದರು.
ಈ ವೇಳೆ ವಿವಿಧ ಮನವಿ ಪತ್ರಗಳನ್ನು ನೀಡಿ ಜನರು ಸಚಿವರ ಮುಂದೆ ತಮ್ಮ ಅಹವಾಲು ಹೇಳಿಕೊಂಡರು.ಸಚಿವರ ಜೊತೆ ಉಡುಪಿ ಶಾಸಕ ರಘುಪತಿ ಭಟ್ ,ಜಿಲ್ಲಾಧಿಕಾರಿ ಕೂರ್ಮಾ ರಾವ್ ಸಹಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
02/05/2022 11:58 am