ಮಂಗಳೂರು: ಅಮಿತ್ ಶಾ ಓರ್ವ ಭಯಂಕರ ಕ್ಲೀನ್ ಮನುಷ್ಯ. ಅವರಷ್ಟು ಕ್ಲೀನ್ ಈ ರಾಜ್ಯ- ದೇಶದಲ್ಲಿ ಮತ್ತೊಬ್ಬರಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ ದಿನಕ್ಕೊಂದು ಹಗರಣ, ದಿನಕ್ಕೊಂದು ಭ್ರಷ್ಟಾಚಾರ... ಇದು ಬಿಜೆಪಿ ಸರಕಾರದ ಸಾಧನೆಯಾಗಿದೆ. ಪಿಎಸ್‌ಐ ಹಗರಣದಲ್ಲಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಪ್ರಮುಖ ಕುಳಗಳೇ ಇದ್ದಾರೆ. ಆದರೆ, ಇದನ್ನು ಬಿಜೆಪಿ ಕಾಂಗ್ರೆಸ್ಸಿಗರ ತಲೆಗೆ ಕಟ್ಟಲು ಮುಂದಾಗಿದೆ.
ತನಿಖೆಯ ಹಾದಿಯೂ ದಿಕ್ಕು ತಪ್ಪಿದ್ದು, ಕಾಟಾಚಾರಕ್ಕೆ ಎಂಬಂತೆ ಮಾಡಲಾಗಿದೆ. ಕಾಂಗ್ರೆಸ್ ಸರಕಾರವಿದ್ದಾಗ ಯಾವುದೇ ಚಿಕ್ಕಪುಟ್ಟ ಸಮಸ್ಯೆ ಬಂದಾಗಲೂ ಅದನ್ನು ಪಾರದರ್ಶಕವಾಗಿ ತನಿಖೆ ಮಾಡಲಾಗಿದೆ. ಆದರೆ, ಕೇವಲ ಗುಲ್ಬರ್ಗದಲ್ಲಿ ಮಾತ್ರ ಪ್ರಕರಣದ ತನಿಖೆ ಮಾಡಲಾಗುತ್ತಿದೆ. ಇನ್ನು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ತನಿಖೆ ಆಗಲೇಬೇಕು. 545 ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ವಿಚಾರವನ್ನೂ ಸೂಕ್ತ ತನಿಖೆಗೆ ಒಳಪಡಿಸಬೇಕು. ಕಮಿಷನ್ ದಂಧೆ ಎಲ್ಲಾ ಕ್ಷೇತ್ರಗಳಲ್ಲೂ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
PublicNext
03/05/2022 06:41 pm