ಕಾರ್ಕಳ: ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ,ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
ಕಳೆದ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಮುನಿಯಾಲು, ಕೊನೇ ಕ್ಷಣದಲ್ಲಿ ಟಿಕೆಟ್ ವಂಚಿತರಾಗಿದ್ದರು.
ಇದೀಗ ಗೋಪಾಲ ಭಂಡಾರಿ ವಿಧಿವಶವಾಗಿರುವುದರಿಂದ ಮುಂದಿನ ಚುನಾವಣೆಯಲ್ಲಿ ಮುನಿಯಾಲು ಉದಯ ಶೆಟ್ಟಿ ಅವರೇ ಅಭ್ಯರ್ಥಿ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿತ್ತು.ಈ ಮಧ್ಯೆ ಅವರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಚುನಾವಣಾ ವರ್ಷದಲ್ಲಿ ಇದು ಜಿಲ್ಲಾ ಕಾಂಗ್ರೆಸ್ ಗೆ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದಿನ ನಡೆಯನ್ನು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಆಪ್ತರ ಬಳಿ ಮುನಿಯಾಲು ಹೇಳಿಕೊಂಡಿದ್ದಾರೆ.
Kshetra Samachara
04/05/2022 08:40 pm