ಪುತ್ತೂರು: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಟೀಕಿಸುವ ಭರದಲ್ಲಿ ಶಾಸಕರ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ಅಸಂವಿಧಾನಿಕ ಪದ ಬಳಸಿದ್ದಾರೆ.
ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಮ್ಮದ್ ಆಲಿ, ಪುತ್ತೂರಿನ ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಪುತ್ತೂರಿನ ಕಚೇರಿಗಳಲ್ಲಿ ನೆಲೆಯೂರಿದ್ದು, ಶಾಸಕರು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಶಾಸಕರೇನು ಷಂಡರೇ ಎಂದು ಪ್ರಶ್ನಿಸಿದ ಮಹಮ್ಮದ್ ಆಲಿ, ಬಿಜೆಪಿ ಸರಕಾರದ ಆಡಳಿತವನ್ನು ಪ್ರಶ್ನಿಸಿದ ಮಾತ್ರಕ್ಕೆ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಿಸುವ ಶಾಸಕ ಸಂಜೀವ ಮಠಂದೂರಿಗೆ ತಮ್ಮ ಕಾರ್ಯವೈಖರಿ ಬದಲಾಯಿಸುವಂತೆ ಕಾಂಗ್ರೇಸ್ ಮುಖಂಡರು ಇದೇ ಸಂದರ್ಭದಲ್ಲಿ ಎಚ್ಚರಿಕೆಯನ್ನೂ ನೀಡಿದರು.
Kshetra Samachara
06/05/2022 02:34 pm