ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ:ನಿರೀಕ್ಷೆಯಂತೆಯೇ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದಾರೆ. ಸಿದ್ಧರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಧ್ವರಾಜ್ ,ಸದ್ಯ ಕೆಪಿಸಿಸಿ ಉಪಾಧ್ಯಕ್ಷರೂ ಹೌದು.ಇವರು ಬಿಜೆಪಿ ಸೇರ್ಪಡೆಗೆ ದಿನಗಣನೆ ಆರಂಭಗೊಂಡಿದ್ದು ,ಇವತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ.

ಹಲವು ಸಮಯಗಳಿಂದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯುವ ಸೂಚನೆ ಇತ್ತು. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಲೋಕಸಭೆ ಚುನಾವಣೆ ಕಣಕ್ಕೆ ಇಳಿದು ಸೋತಿದ್ದರು.ಬಳಿಕ ಕಾಂಗ್ರೆಸ್ ನೊಂದಿಗೆ ಅಂತರ ಕಾಯ್ದುಕೊಳ್ಳುತ್ತಾ ಬಂದಿದ್ದ ಪ್ರಮೋದ್ ,ಬಿಜೆಪಿ ಸೇರುವ ವದಂತಿ ಹಬ್ಬಿತ್ತು.ನಿನ್ನೆಯಷ್ಟೇ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ,ಪ್ರಮೋದ್ ಬಿಜೆಪಿ ಸೇರಲು ಜಿಲ್ಲಾ ಬಿಜೆಪಿ ಗ್ರೀನ್ ಸಿಗ್ನಲ್ ನೀಡಿದ್ದನ್ನು ಖಚಿತಪಡಿಸಿದ್ದರು.ಇದೀಗ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ಶೀಘ್ರ ಅವರು ಬಿಜೆಪಿ ಸೇರಲಿದ್ದಾರೆ.

Edited By : Nirmala Aralikatti
PublicNext

PublicNext

07/05/2022 04:15 pm

Cinque Terre

23.58 K

Cinque Terre

18

ಸಂಬಂಧಿತ ಸುದ್ದಿ