ಉಡುಪಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಒಂದು ರಾಷ್ಟೀಯ ಪಕ್ಷವಾಗಿದ್ದು, ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ ಎಂದು ಉಡುಪಿಯ ಮಾಜಿ ಶಾಸಕ ಯು. ಆರ್. ಸಭಾಪತಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಪ್ರಥಮ ಬಾರಿಗೆ ಸಚಿವ ಸ್ಥಾನ ನೀಡಿತ್ತು. ಪಕ್ಷದ ಸಂಕ್ಟಷ್ಟ ಕಾಲದಲ್ಲಿ ಪಕ್ಷ ಸಂಘಟನೆಯ ಯಾವುದೇ ಕಾರ್ಯಕ್ಕೆ ತನ್ನನ್ನು ತೊಡಗಿಸಿಕೊಳ್ಳದೆ ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲೂ ಜನಸೇವೆ ಮಾಡದೇ ಮನೆಯಲ್ಲೇ ರಾಜಕೀಯ ಮಾಡುತಿದ್ದರು. ಇನ್ನು ಮುಂದೆ ನಿಸ್ಸಂದೇಹ ವಾಗಿ ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರು ಬಲಾಡ್ಯವಾಗಿ ಕಟ್ಟುವುದಕ್ಕೆ ತಾನು ಶ್ರಮಿಸುವುದಾಗಿ ಸಭಾಪತಿ ಹೇಳಿದ್ದಾರೆ. ಅಧಿಕಾರದ ಆಸೆಯಿಂದ ಬಿಜೆಪಿ ಅವರನ್ನು ಸೇರ್ಪಡೆಗೊಳಿಸಿದರೆ ಬಿಜೆಪಿಗೂ ನಾಳೆ ದ್ರೋಹ ಬಗೆಯುವುದು ಸರ್ವ ವಿಧಿತ ಎಂದು ಅವರು ಬಿಜೆಪಿ ನಾಯಕರನ್ನು ಎಚ್ಚರಿಸಿದ್ದಾರೆ. ಹಿಂದೆ ಅವರ ತಾಯಿ ಮನೋರಮಾ ಮದ್ವರಾಜ್ ಸಾಕಷ್ಟು ಬಾರಿ ಕಾಂಗ್ರೆಸ್ ಸರಕಾರದಲ್ಲಿ ಮಂತ್ರಿಯಾಗಿದ್ದು ಕೊನೆ ಗಳಿಗೆಯಲ್ಲಿ ಬಿಜೆಪಿ ಸಂಸದೆಯಾಗಿ ಬಿಜೆಪಿಗೆ ಏನು ಮಾಡಿದ್ದರೆಂದು ಬಿಜೆಪಿ ನಾಯಕರು ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ.
Kshetra Samachara
07/05/2022 05:43 pm