ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: 'ಕ್ರಿಮಿನಲ್‌ಗಳನ್ನು ಹೊರತುಪಡಿಸಿ ಬಿಜೆಪಿಗೆ ಯಾರೇ ಬಂದರೂ ಬಾಗಿಲು ತೆರೆದಿದೆ'

ಬ್ರಹ್ಮಾವರ: ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು ಕಾಲಕಾಲಕ್ಕೆ ಬೇರೆ ಪಕ್ಷದವರು ನಮ್ಮ ಪಕ್ಷವನ್ನು ಸೇರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶದಲ್ಲಿ ಅಪಾರ ಗೌರವ ಸಿಗುತ್ತಿದೆ. ಮೋದಿಯವರದ್ದು ಅಭಿವೃದ್ಧಿ, ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ರಹಿತ ಆಡಳಿತ. ಪ್ರಧಾನಿ ನರೇಂದ್ರ ಮೋದಿ ನೇತೃತ್ವವನ್ನು ಒಪ್ಪಿ ಹಲವರು ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ. ಒಳ ಜಗಳದಿಂದ ರಾಜ್ಯ ಕಾಂಗ್ರೆಸ್ ಅವನತಿಯತ್ತ ಸಾಗಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ನೇತೃತ್ವವೇ ಇಲ್ಲ' ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನೀಲಾವರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ತ್ಯಜಿಸುವ ಹಲವು ನಾಯಕರು ನಮ್ಮ ಸಂಪರ್ಕಕ್ಕೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಹಲವಾರು ನಾಯಕರು ಬಿಜೆಪಿ ಸೇರಲಿದ್ದಾರೆ. ಬಿಜೆಪಿಗೆ ಯಾರೇ ಬಂದರೂ ನಮ್ಮ ಬಾಗಿಲು ತೆರೆದಿದೆ. ಕ್ರಿಮಿನಲ್ ಕೇಸ್‌ ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಶೋಭಾ ಹೇಳಿದ್ದಾರೆ.

Edited By :
Kshetra Samachara

Kshetra Samachara

07/05/2022 06:01 pm

Cinque Terre

6.41 K

Cinque Terre

0

ಸಂಬಂಧಿತ ಸುದ್ದಿ