ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ಸರಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶ್ನೋತ್ತರ ಅವಧಿಯಲ್ಲಿ ಭಾಗವಹಿಸಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳ ಪ್ರಶ್ನೆಗಳನ್ನು ವಿಶ್ಲೇಷಿಸಿ ಸೂಕ್ತ ಪರಿಹಾರ ಮಾರ್ಗೋಪಾಯಗಳನ್ನು ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು ಮತ್ತು ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಪಕ್ಷದ ಸಂಘಟನಾತ್ಮಕ ವಿಚಾರಗಳು ಮತ್ತು ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ವ್ಯವಹಾರ ಖಾತೆ ಸಚಿವ ಉಮೇಶ್ ಕತ್ತಿ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.
Kshetra Samachara
07/05/2022 06:52 pm