ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಕಾಂಗ್ರೆಸ್ ಪ್ರತಿಭಟನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಆದಿವಾಸಿ ಸಮುದಾಯದ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳನ್ನು ಬಂಧಿಸದಿರುವುದನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಮಹಿಳಾ ಹಾಗೂ ಕಾರ್ಮಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ, ಕಾಂಗ್ರೆಸ್ ಮುಖಂಡ ರಂಜನ್ ಗೌಡ,ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

10/05/2022 07:50 am

Cinque Terre

6.09 K

Cinque Terre

0

ಸಂಬಂಧಿತ ಸುದ್ದಿ