ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಭ್ರಷ್ಟಾಚಾರ ಮುಚ್ಚಿ ಹಾಕಲು ಬಿಜೆಪಿ ಕೋಮು ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ

ಉಡುಪಿ: ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಬಿಜೆಪಿ ಸರಕಾರ ಕೋಮು ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಅಶಾಂತಿ ತಾಂಡವವಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದ್ದಾರೆ.

ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧ್ರುವನಾರಾಯಣ ,ರಾಜ್ಯದ ಜನ ಬಿಜೆಪಿ ಬಗ್ಗೆ ಭರವಸೆಯಿಟ್ಟು ಮತ ಹಾಕಿದ್ದಾರೆ. ಆದರೆ ಜನರ ನಿರೀಕ್ಷೆ ಹುಸಿಯಾಗಿದೆ.ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕ ರಾಜ್ಯವನ್ನು ಅಶಾಂತಿಯ ರಾಜ್ಯವನ್ನಾಗಿ ಮಾಡಿದ್ದಾರೆ. ಕರ್ನಾಟಕಕ್ಕಿದ್ದ ಒಳ್ಳೆಯ ಹೆಸರನ್ನು ಹಾಳುಮಾಡಿದ್ದಾರೆ.ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಕೋಮು ವಿಷಯಗಳನ್ನು ಮುನ್ನೆಲೆಗೆ ತರಲಾಗುತ್ತಿದೆ.

ಇವತ್ತು ಸಂಘಟನೆಗಳ ಮುಖಾಂತರ ಭಜನೆ ಮಾಡುತ್ತೇವೆ ಎಂದು ಹೊರಟಿದ್ದಾರೆ. ಇವರು ಭಜನೆ ಮಾಡಬೇಡಿ ಎಂದು ಹೇಳಿದವರು ಯಾರು? ಈ ಹಿಂದೆ ಇಲ್ಲದ ಭಜನೆ ಈಗ ಏಕೆ? ಪ್ರತಿಯೊಬ್ಬರಿಗೂ ಅವರವರ ಧರ್ಮ ಆಚರಣೆ ಮಾಡುವ ಹಕ್ಕು ಇದೆ. ಹಿಂದೂಗಳು ಹಿಂದೂಗಳದ್ದು ಮಾಡುತ್ತಾರೆ ,ಮುಸಲ್ಮಾನರು ಅವರದ್ದು ಮಾಡುತ್ತಾರೆ.ಇಲ್ಲಿ ಸಮಸ್ಯೆ ಯಾರಿಗಿದೆ? ಎಂದು ದ್ರುವನಾರಾಯಣ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

11/05/2022 05:37 pm

Cinque Terre

6.19 K

Cinque Terre

0

ಸಂಬಂಧಿತ ಸುದ್ದಿ