ಉಡುಪಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಕಾಮಗಾರಿಯಲ್ಲಿ 40% ಕಮಿಷನ್ ವಿಚಾರವಾಗಿ ಇವತ್ತು ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಎದುರು ಪ್ರತಿಭಟನೆ ನಡೆಯಿತು. ಇತ್ತೀಚೆಗೆ ಉದ್ಯೋಗ ಸಿಗದೆ ಎಂಬಿಎ ಪದವೀಧರೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ದ.ಕ. ಮೂಲದ ಯುವತಿ ಸಹನಾ ಉಡುಪಿಯ ಶಿರ್ವದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಯುವತಿಯ ಆತ್ಮಹತ್ಯೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಯುವಕ, ಯುವತಿಯರಿಗೆ ಉದ್ಯೋಗ ನೀಡದ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಯುವತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ ಮಹಮ್ಮದ್ ನಲಪಾಡ್, ಯೂತ್ ಕಾಂಗ್ರೆಸ್ ನಿಂದ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
Kshetra Samachara
12/05/2022 10:17 pm