ಮುಲ್ಕಿ: ಮುಲ್ಕಿ-ಮೂಡಬಿದ್ರೆ ಬಿಜೆಪಿ ಮಂಡಲದ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು.
ಶಾಸಕ ಉಮಾನಾಥ್ ಕೋಟ್ಯಾನ್ ಸಭೆ ಉದ್ಘಾಟಿಸಿ ಮಾತನಾಡಿ ಕಾರ್ಯಕರ್ತರು ಪಕ್ಷದ ಆಸ್ತಿಯಾಗಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆಪಿ ಸುಚರಿತ ಶೆಟ್ಟಿಯವರಿಗೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಮಿತಿಗೆ ಕರ್ನಾಟಕ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಹರೀಶ್ ಮೂಡುಶೆಡ್ಡೆಯವರಿಗೆ ಮಂಡಲದ ವತಿಯಿಂದ ಗೌರವಿಸಲಾಯಿತು.
ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ ಉಪಸ್ಥಿತರಿದ್ದರು.
Kshetra Samachara
15/05/2022 04:58 pm