ಉಡುಪಿ: ಅಧಿಕಾರಕ್ಕೆ ಬರುವಾಗ ನೀಡಿದ ಭರವಸೆಯಂತೆ ಯುವ ಜನತೆಗೆ ಉದ್ಯೋಗ ನೀಡಿ. ಈ ಮೂಲಕ ದಿನನಿತ್ಯ ಯುವ ಜನತೆಯ ಆತ್ಮಹತ್ಯೆಯನ್ನು ತಪ್ಪಿಸಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ಸಹನಾ ದೇವಾಡಿಗ ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಎಂಬಿಎ ಕಲಿತರೂ ಅರ್ಹ ಉದ್ಯೋಗ ಸಿಕ್ಕಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿದ್ದರು. ಇದು ಒಂದು ಪ್ರಕರಣ ಮಾತ್ರ. ದಿನನಿತ್ಯ ಇಂತಹ ಘಟನೆಗಳು ಸಾಮಾನ್ಯ ಎಂಬಂತಾಗಿ ಹೋಗಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಮೂಲಕ ಯುವಕ ಯುವತಿಯರ ಆತ್ಮಹತ್ಯೆಗಳನ್ನು ತಪ್ಪಿಸಬೇಕು ಎಂದು ಸರಕಾರಗಳಿಗೆ ಮನವಿ ಮಾಡಿದ್ದಾರೆ.
Kshetra Samachara
17/05/2022 07:32 pm