ವಿಟ್ಲ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 23.84 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿಟ್ಲ ಕಂದಾಯ ಇಲಾಖೆಯ ನೂತನ ನಾಡಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ ಸಮಾರಂಭ ಸೋಮವಾರ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಿದಾಗ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ. ಇಲಾಖೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿದಾಗ ಜನರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ದ.ಕ ಜಿಲ್ಲೆಯಲ್ಲಿ ವಿಟ್ಲ ಮತ್ತು ಉಪ್ಪಿನಂಗಡಿಗೆ ಎರಡು ನಾಡಕಚೇರಿ ಕಟ್ಟಡಕ್ಕೆ ಅನುದಾನ ಮಂಜೂರಾಗಿದೆ.
ಜಿಲ್ಲೆಗೆ ನಾಲ್ಕು ರೈತ ಸಂಪರ್ಕ ಕೇಂದ್ರ ಬಂದಿದ್ದು, ಅದರಲ್ಲಿ ಒಂದು ವಿಟ್ಲದಲ್ಲಿ ನಿರ್ಮಾಣಗೊಳ್ಳುತ್ತಿದೆ. ಕೃಷಿ ಇಲಾಖೆ, ಕಂದಾಯ ಇಲಾಖೆಗೆ ಪರಿಪೂರ್ಣ ಕಟ್ಟಡ ಇದ್ದಾಗ ಮಾತ್ರ ಜನರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ. ವಿಟ್ಲ ತಾಲೂಕು ಕೇಂದ್ರ ಆಗುವ ದೆಸೆಯಿಂದ ಸುಸಜ್ಜಿತ ನಾಡಕಚೇರಿ ನಿರ್ಮಾಣಗೊಳ್ಳುತ್ತಿದೆ ಎಂದರು.
Kshetra Samachara
23/05/2022 06:52 pm