ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ನಗರದಲ್ಲಿ ನಡೆಯುತ್ತಿರುವ ಮಂಗಳೂರು ಮನಪಾ ಕಾಮಗಾರಿ, ಸ್ಮಾರ್ಟ್ ಸಿಟಿ ಕಾಮಗಾರಿ, ಕೆಯುಐಡಿಎಫ್ ಸಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ 24×7 ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಇಂದು ಬೆಳಗ್ಗೆ 7 ಗಂಟೆಯಿಂದ 9ಗಂಟೆಯವರೆಗೆ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ‌.

ಬಳಿಕ ಮಾತನಾಡಿದ ಅವರು, ಈ ಯೋಜನೆಗಳು ಕೇವಲ ಮಂಗಳೂರು ಮಾತ್ರವಲ್ಲದೆ ಇಡೀ ಜಿಲ್ಲೆಯ ಜನತೆಯನ್ನು ಗಮನದಲ್ಲಿಟ್ಟುಕೊಂಡು ಕೈಗೆತ್ತಿಕೊಳ್ಳಲಾಗುತ್ತಿದೆ‌. ಅಲ್ಲದೆ ಕೆಲವೊಂದು ಕಾಮಗಾರಿಗಳನ್ನು ಇಡೀ ರಾಜ್ಯವನ್ನೇ ಗಮನದಲ್ಲಿಟ್ಟುಕೊಂಡು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ಕಾಮಗಾರಿಗಳಿಗೂ ಇನ್ನಷ್ಟು ವೇಗ ಕೊಡಬೇಕೆಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಡಿಸೆಂಬರ್ - ಜನವರಿಯ ಹೊತ್ತಿಗೆ ಸಾರ್ವಜನಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಲೋಕಾರ್ಪಣೆಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಹಳ ಮುಖ್ಯವಾಗಿ ನಗರದ ಮಂಗಳಾದೇವಿ ಸಮೀಪದ ಎಮ್ಮೆಕೆರೆಯಲ್ಲಿ 24.94 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳವು ತ್ವರಿತ ಗತಿಯಲ್ಲಿ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಕದ್ರಿಪಾರ್ಕ್ ಉನ್ನತೀಕರಣ ಕಾಮಗಾರಿ ಈಗಾಗಲೇ ಶೇ.90%ದಷ್ಟು ಪೂರ್ಣಗೊಂಡಿದೆ. ಇಲ್ಲಿನ ಪಾರ್ಕಿಂಗ್ ಸಮಸ್ಯೆಗಳ ಕುರಿತು ಚರ್ಚೆಗಳು ನಡೆದಿದೆ. ವ್ಯವಸ್ಥಿತವಾದ ಪಾರ್ಕಿಂಗ್ ಅನ್ನು ಪರ್ಯಾಯವಾಗಿ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸರ್ವೀಸ್ ಬಸ್ ನಿಲ್ದಾಣಕ್ಕೆ ಶಾಶ್ವತವಾದ ಕಾಯಕಲ್ಪ ಒದಗಿಸಬೇಕು ಎನ್ನುವ ನಿಟ್ಟಿನಲ್ಲಿ ವ್ಯವಸ್ಥಿತ ಕಾಮಗಾರಿ ಪ್ರಕ್ರಿಯೆಗಳಿಂದ ಪೂರ್ಣಗೊಳ್ಳುತ್ತಿದೆ‌. ಶೀಘ್ರ ಅದರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

Edited By : Nirmala Aralikatti
Kshetra Samachara

Kshetra Samachara

29/05/2022 11:20 am

Cinque Terre

10.43 K

Cinque Terre

0

ಸಂಬಂಧಿತ ಸುದ್ದಿ