ಬೈಂದೂರು: ಮೇ 31 ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕಾಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನಾಳೆ ಸಂಜೆ 6.20ಕ್ಕೆ ಮಂಗಳೂರಿಗೆ ಆಗಮಿಸಲಿರುವ ಸಿಎಂ, ರಾತ್ರಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬುಧವಾರ ಬೆಳಗ್ಗೆ 10.30ಕ್ಕೆ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಆಯೋಜಿಸಿರುವ ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹೆಬ್ರಿಯಲ್ಲಿ ಉಡುಪಿ ಜಿಲ್ಲಾಡಳಿತ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿರುವ ಹೆಬ್ರಿ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿ ನಿರ್ಮಾಣ ಮತ್ತು ಹೆಬ್ರಿ ಬಸ್ ನಿಲ್ದಾಣ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 2. 30ಕ್ಕೆ ಮೂಡುಬಿದಿರೆಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಬುಧವಾರ ಸಂಜೆ 6. 50ಕ್ಕೆ ಸಿಎಂ ಮಂಗಳೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.
Kshetra Samachara
30/05/2022 08:20 pm