ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪಠ್ಯ ಪುಸ್ತಕ ಸಮಿತಿಯಲ್ಲಿ ವಿವಾದ ಇಲ್ಲದ ವ್ಯಕ್ತಿಗಳು ಬೇಕು: ಸಚಿವೆ ಶೋಭಾ

ಉಡುಪಿ: ವಿವಾದ ಇಲ್ಲದಂತಹ ವ್ಯಕ್ತಿಗಳನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಜೋಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಣಿಪಾಲದಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಮಕ್ಕಳು ನಮ್ಮ ಚರಿತ್ರೆಯನ್ನು ಕಲಿಯಬೇಕು. ದೇಶದ ಇತಿಹಾಸವನ್ನು ಕಲಿಯಬೇಕು.ಇತಿಹಾಸದಲ್ಲಿ ಆಗಿರುವ ಲೋಪದೋಷಗಳನ್ನು ತಿಳಿದುಕೊಳ್ಳಬೇಕು. ಬ್ರಿಟಿಷರ ದೇಶಕ್ಕೆ ಯಾಕೆ ಬಂದರು? ಮೊಘಲರು ಈ ದೇಶಕ್ಕೆ ಯಾಕೆ ಬಂದರು? ಘಜ್ನಿ ಮಹಮ್ಮದ್ 18 ಬಾರಿ ದಾಳಿ ಮಾಡಿದ್ದು ಯಾಕೆ? ನಮ್ಮ ಸಮಸ್ಯೆ ನಮ್ಮ ಕೊರತೆ ಏನು? ಎಲ್ಲವನ್ನು ನಮ್ಮ ಮಕ್ಕಳು ಅಧ್ಯಯನ ಮಾಡಬೇಕು ಎಂದರು.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ವ್ಯಕ್ತಿ ಅಥವಾ ಸಮಿತಿಯ ಬಗ್ಗೆ ನಾನು ಮಾತನಾಡಲ್ಲ ಎಂದ ಅವರು ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ರಾಜ್ಯ ನಮ್ಮದು. ನಮ್ಮ ಕನ್ನಡ ಸಾಹಿತ್ಯ ಸತ್ವಯುತವಾಗಿದೆ, ಕನ್ನಡದ ಸಾಹಿತಿ ಕವಿಗಳಲ್ಲಿ ಅಷ್ಟೊಂದು ತಾಕತ್ತು ಇದೆ.ನಮ್ಮ ರಾಜ್ಯದ ಏಕೀಕರಣದಂತಹ ವಿಚಾರಗಳು ಕೂಡ ಮಕ್ಕಳಿಗೆ ತಿಳಿಯುವಂತಾಗಬೇಕು ಎಂದರು. ಎಲ್ಲರಿಗೂ ಪ್ರಿಯವಾದ ವಿಚಾರಗಳನ್ನು ಹೇಳಬೇಕು. ಆದರೆ ಎಲ್ಲರನ್ನೂ ಖುಷಿಪಡಿಸುವುದು ಕಷ್ಟ. ಎಲ್ಲರೂ ಸಮಾನ ಎನ್ನುವ ರೀತಿಯಲ್ಲಿ ಪರಿಷ್ಕರಣೆಯಾಗಬೇಕು. ಮಕ್ಕಳ ಮನಸ್ಸನ್ನು ಪುಳಕಗೊಳಿಸುವ, ವಿಕಸಿತಗೊಳಿಸುವ ಪಠ್ಯಗಳು ಬರಬೇಕು ಎಂದು ಹೇಳಿದ್ದಾರೆ.

Edited By : Manjunath H D
PublicNext

PublicNext

31/05/2022 01:14 pm

Cinque Terre

27.84 K

Cinque Terre

3

ಸಂಬಂಧಿತ ಸುದ್ದಿ