ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಬ್ರೇಕಿಂಗ್ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಮೂರನೇ ಅಭ್ಯರ್ಥಿಗೆ ಸರಳ ಬಹುಮತ ಬರಲಿದೆ: ಸಿಎಂ

ಉಡುಪಿ: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿಗೆ ಸರಳ ಬಹುಮತ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿಯ ಮಣಿಪಾಲದಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ, ಎರಡನೇ ಪ್ರಾಶಸ್ತ್ಯದ ಮತಗಳಲ್ಲಿ ನಾವು ಗೆಲ್ಲುತ್ತೇವೆ. ನಮಗೆ ಮತಗಳ ಕೊರತೆಯಾಗುವುದಿಲ್ಲ‌.ಮುಂದೆ ಚುನಾವಣೆ ನಡೆಯಲಿದೆ. ಏನಾಗುತ್ತೋ ನೋಡೋಣ.ನಮಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನಲ್ಲಿ ಸಾಕಷ್ಟು ಸ್ನೇಹಿತರಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಶಾಲೆಗಳಿಗೆ ಪಠ್ಯಪುಸ್ತಕವನ್ನು ಆದಷ್ಟು ಬೇಗ ಪೂರೈಕೆ ಮಾಡುತ್ತೇವೆ ಎಂದು ಹೇಳಿದರು.ಲವ್ ಜಿಹಾದ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ,ಅದನ್ನು ಗೃಹ ಇಲಾಖೆ ನೋಡಿಕೊಳ್ಳುತ್ತದೆ ಎಂದು ಹೇಳಿದರು.

Edited By : Nagesh Gaonkar
PublicNext

PublicNext

31/05/2022 08:04 pm

Cinque Terre

23.1 K

Cinque Terre

1

ಸಂಬಂಧಿತ ಸುದ್ದಿ