ಮೂಡುಬಿದಿರೆ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜೂನ್ 1ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 1.30ಕ್ಕೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಿಂದ ಹೊರಟು 2.30ಕ್ಕೆ ಮೂಡುಬಿದಿರೆಗೆ ಆಗಮಿಸುವರು. 3 ಗಂಟೆಗೆ ಆಳ್ವಾಸ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿರುವ ವಿದ್ಯಾ ನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಸಂಜೆ 5 ಗಂಟೆಗೆ ಮೂಡುಬಿದಿರೆಯಿಂದ ಹೊರಟು 6 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ 6.50ಕ್ಕೆ ವಿಮಾನದ ಮೂಲಕ ಹೊರಟು 7.40ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
01/06/2022 09:31 am