ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುಲ್ಡೋಜರ್ ರಾಜಕೀಯವನ್ನು ನಿಲ್ಲಿಸಿ : ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ

ಮಂಗಳೂರು : ಬುಲ್ಡೋಜರ್ ರಾಜಕೀಯವನ್ನು ನಿಲ್ಲಿಸಿ, ಸರಕಾರಿ ಪ್ರಾಯೋಜಿತ ದಬ್ಬಾಳಿಕೆ ನಡೆಯುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕ್ಯಾಂಪಸ್ ಫ್ರಂಟ್ ನಿಂದ ಭಿತ್ತಿಪತ್ರ ಪ್ರದರ್ಶನ ನಡೆಯಿತು.

ಸಂವಿಧಾನಬದ್ದ ಹಕ್ಕಾದ ಪ್ರತಿಭಟನೆಯನ್ನು ನಡೆಸಿದ ಜನಸಮುದಾಯದ ಮೇಲೆ ಸರಕಾರಿ ಪ್ರಾಯೋಜಿತವಾಗಿ ನಡೆಸುತ್ತಿರುವ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರದಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ 13 ವಿವಿಧ ಕಾಲೇಜು ಹಾಗೂ ಸುಮಾರು 37 ವಲಯ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಭಿತ್ತಿಪತ್ರ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟಿನ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

13/06/2022 09:19 pm

Cinque Terre

12.28 K

Cinque Terre

6

ಸಂಬಂಧಿತ ಸುದ್ದಿ