ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೀಘ್ರವೇ ಯಂಗ್ ಇಂಡಿಯಾ ಬೋಲ್... ಯುವ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಚಿರಂಜೀವಿ ಆರ್. ದಕ್ಷಿಣ ಕನ್ನಡ ಜಿಲ್ಲೆಯ ಯಂಗ್ ಇಂಡಿಯಾ ಬೋಲ್- 2 ಯುವ ಸ್ಪರ್ಧೆಯ ಉಸ್ತುವಾರಿ ಆಗಿರುತ್ತಾರೆ. ನಾನಾ ಬಹುಮಾನಗಳಿರುವ ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬಹುದು. ಜಿಲ್ಲಾ ಮಟ್ಟದಲ್ಲಿ ಗೆದ್ದವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗ್ತಾರೆ. ತದನಂತರ ಅವರಿಗೆ ಕಾಂಗ್ರೆಸ್ ವಕ್ತಾರ ಆಗುವ ಅವಕಾಶ ಇದೆ ಎಂದರು.
ಉತ್ತರ ಪ್ರದೇಶ ʼಬುಲ್ಡೋಜರ್ ರಾಜ್ಯʼ ಆಗಿದೆ. ಜೆಎನ್‌ಯು ವಿದ್ಯಾರ್ಥಿ ನಾಯಕಿಯಾಗಿದ್ದ ಫಾತಿಮಾ ಅವರ ಮನೆಯನ್ನು ಬುಲ್ಡೋಜರ್ ಹಾಯಿಸಿ ಒಡೆಯಲಾಗಿದೆ. ಇಂತಹ ಕಾನೂನು ಬಾಹಿರ ಘಟನೆಯನ್ನು ಖಂಡಿಸುವುದಾಗಿ ತಿಳಿಸಿದ ಲುಕ್ಮಾನ್, ದಕ್ಷಿಣ ಕನ್ನಡ ಜಿಲ್ಲೆಯನ್ನು ʼಬುಲ್ಡೋಜರ್ ಜಿಲ್ಲೆʼ ಆಗಲು ನಾವು ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
13/06/2022 10:57 pm