ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ: ಸಚಿವ ಸುನಿಲ್ ಕುಮಾರ್

ಹೆಬ್ರಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ಕಬ್ಬಿನಾಲೆ ಮೇಲ್ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಕಳ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ ಕುಮಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವರು, ಕಳೆದ 8 ವರ್ಷಗಳಿಂದ ಕೇಂದ್ರ ಸರ್ಕಾರ ಅತ್ಯುತ್ತಮ ಆಡಳಿತ ನೀಡಿದೆ. ಬುಡಕಟ್ಟು ಜನಾಂಗದ ಏಳಿಗೆಗಾಗಿ 3,110 ವನ್‌ಧನ್ ವಿಕಾಸ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ದೇಶದಾದ್ಯಂತ 384 ಏಕಲವ್ಯ ಮಾದರಿ ವಸತಿ ವಿದ್ಯಾಲಯಗಳು ಕಾರ್ಯಾಚರಿಸುತ್ತಿವೆ. ಸ್ವಾತಂತ್ರ್ಯ ಹೋರಾಟಗಾರ ಹಾಗೂ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮದಿನ (ನವೆಂಬರ್ 15)ಅನ್ನು 'ಜನ್ ಜಾತೀಯ ಗೌರವ' ದಿವಸ್ ಎಂದು ಘೋಷಿಸಲಾಗಿದೆ. ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸರ್ಕಾರ ಕಟಿಬದ್ಧವಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

14/06/2022 05:23 pm

Cinque Terre

3.9 K

Cinque Terre

0

ಸಂಬಂಧಿತ ಸುದ್ದಿ