ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಹುಲ್ ಗಾಂಧಿಗೆ ಇಡಿ ಕಂಟಕ, ಅತ್ತಾವರದಲ್ಲಿರುವ ಐಟಿ ಕಚೇರಿಗೆ ಮುತ್ತಿಗೆ ಯತ್ನ!

ಮಂಗಳೂರು: ಬಿಜೆಪಿ ಸರಕಾರ ಇಡಿ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಫಳ್ನೀರ್ ಎಸ್ ಎಲ್ ಮಥಾಯಿಸ್ ಪಾಕ್೯ ನಿಂದ ಅತ್ತಾವರದಲ್ಲಿರುವ ಐಟಿ ಕಚೇರಿಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.

ಐಟಿ ಕಚೇರಿಯತ್ತ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ದಾರಿ ಮಧ್ಯೆ ಪೊಲೀಸರು ತಡೆದು ವಶಕ್ಕೆ ಪಡೆದ್ರು ಈ ಮಧ್ಯೆ ಪೊಲೀಸರು ಹಾಗೂ ಕಾರ್ಯಕರ್ತರು ಮಧ್ಯೆ ವಾಗ್ವಾದ ಕೂಡಾ ನಡೆದಿದೆ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಥ ರೈ, ಐವನ್ ಡಿಸೋಜ,ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

Edited By :
Kshetra Samachara

Kshetra Samachara

17/06/2022 11:43 am

Cinque Terre

6.42 K

Cinque Terre

1