ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇ.ಡಿ. ಬಳಸಿಕೊಂಡು ಕಾಂಗ್ರೆಸ್ಸನ್ನು ಹತ್ತಿಕ್ಕುವ ಕೆಲಸ; ಸೊರಕೆ ಸಿಡಿಮಿಡಿ

ಉಡುಪಿ: ಇವತ್ತು ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಇ.ಡಿ. ಮತ್ತು ತನಿಖಾ ಏಜೆನ್ಸಿಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಉಡುಪಿಯ ಮಣಿಪಾಲದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಅವರು ಮಾತನಾಡಿದರು. ರಾಷ್ಟ್ರಪತಿ ಚುನಾವಣೆ ಸಂದರ್ಭ ಕಾಂಗ್ರೆಸ್ ನ ಒಗ್ಗಟ್ಟನ್ನು ಒಡೆಯಲು ಬಿಜೆಪಿ ಯತ್ನಿಸುತ್ತಿದೆ. ಬೇರೆ ಬೇರೆ ವಿಷಯಗಳನ್ನು ತಂದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಬಿಜೆಪಿ ವ್ಯವಸ್ಥಿತವಾಗಿ ಮಾಡುತ್ತಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿದೆ. ಈ ಹಂತದಲ್ಲಿ ನಮ್ಮ ನಾಯಕರ ಮೇಲೆ ಇ.ಡಿ. ತನಿಖೆ ನೆಪದಲ್ಲಿ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದು ಸೊರಕೆ ಹೇಳಿದ್ದಾರೆ. ಇದಕ್ಕೂ ಮುನ್ನ ಮಣಿಪಾಲದ ಕಂಟ್ರಿ ಹೋಟೆಲ್ ನಿಂದ ಜಿಲ್ಲಾಧಿಕಾರಿ ಕಚೇರಿ ತನಕ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿದರು.

Edited By :
Kshetra Samachara

Kshetra Samachara

17/06/2022 02:02 pm

Cinque Terre

10.3 K

Cinque Terre

1

ಸಂಬಂಧಿತ ಸುದ್ದಿ