ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಸುರತ್ಕಲ್ ಟೋಲ್ ಗೇಟ್ ತೆರವಿನ ಹುಸಿ ಭರವಸೆ ನೀಡಿದ ಸಂಸದರು, ಶಾಸಕರು ರಾಜೀನಾಮೆ ನೀಡಲಿ"

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲಾಗುವುದು ಎಂಬ ಭರವಸೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಾ.ವೈ.ಭರತ್ ಶೆಟ್ಟಿ ಹುಸಿಗೊಳಿಸಿದ್ದಾರೆ. ಆದ್ದರಿಂದ ತಕ್ಷಣ ಈ ಟೋಲ್ ಗೇಟ್ ತೆರವುಗೊಳಿಸಬೇಕು ಇಲ್ಲವಾದಲ್ಲಿ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.

ಮಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು 60 ಕಿ.ಮೀ. ಒಳಗಿನ ಎಲ್ಲಾ ಟೋಲ್ ಗೇಟ್ ಗಳನ್ನು 90 ದಿನಗಳೊಳಗೆ ತೆರವುಗೊಳಿಸುವುದಾಗಿ ಲೋಕಸಭೆಯಲ್ಲಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸದರು, ಶಾಸಕರು ಸುರತ್ಕಲ್ ಟೋಲ್ ಗೇಟ್ ತೆರವು ಮಾಡುವುದಾಗಿ ಭರವಸೆ ನೀಡಿದ್ದರು.

ಆದರೆ, ಈ ಭರವಸೆ ಗಡುವು ಜೂನ್ 22ಕ್ಕೆ ಮುಕ್ತಾಯಗೊಳ್ಳಲಿದ್ದು, ಟೋಲ್ ತೆರವಿಗೆ ಯಾವುದೇ ಕ್ರಮವಾಗಿಲ್ಲ. ಬದಲಿಗೆ ಟೋಲ್ ಸಂಗ್ರಹ ಗುತ್ತಿಗೆ ನವೀಕರಣ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಟೋಲ್ ಸಂಗ್ರಹವನ್ನು ಜೂನ್ 22ರ ಬಳಿಕ ಕೈಬಿಡಬೇಕು. ಇಲ್ಲದಿದ್ದಲ್ಲಿ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದರು.

ಈ ನಡುವೆ ಟೋಲ್ ಗೇಟ್ ವಿರೋಧಿ ಹೋರಾಟಗಾರರು ಕಮಿಷನ್ ಪಡೆಯುವ ನಕಲಿ ಹೋರಾಟಗಾರರು ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಆರೋಪಿಸಿದ್ದಾರೆ‌. ಯಾವುದೇ ಆಧಾರಗಳಿಲ್ಲದೆ‌ ಈ ರೀತಿಯ ಆರೋಪ ಅವರ ಸ್ಥಾನಕ್ಕೆ ಶೋಭೆಯಲ್ಲ.

ಶಾಸಕರು ಸಾಕ್ಷಿ ಒದಗಿಸಲಿ. ಹಣ ಪಡೆದವರು, ಹಣ ನೀಡಿದವರ ಗುರುತು ಬಹಿರಂಗಗೊಳಿಸಲಿ. ಸಾಧ್ಯವಾಗದಿದ್ದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲಿ ಎಂದು ಮುನೀರ್ ಸವಾಲು ಹಾಕಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

17/06/2022 07:20 pm

Cinque Terre

7.26 K

Cinque Terre

0

ಸಂಬಂಧಿತ ಸುದ್ದಿ