ಕಾಪು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಎಂಟು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭ ಕಾಪು ಕ್ಷೇತ್ರ ಬಿಜೆಪಿ ಯುವಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ವಿಕಾಸ್ ತೀರ್ಥ ಬೈಕ್ Rally ಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಇಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು, ಕೇಂದ್ರ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮತ್ತು ಜನರಲ್ಲಿ ಸರಕಾರದ ಬಗ್ಗೆ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ರ್ಯಾಲಿ ಪ್ರಾಮುಖ್ಯತೆ ಪಡೆದಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಪಿ. ಶೆಟ್ಟಿ ಗುರ್ಮೆ, ಗೀತಾಂಜಲಿ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಹೊರಟ ಜಾಥಾ ಮೂಳೂರು, ಉಚ್ಚಿಲ, ಪಾಂಗಾಳ, ಕಟಪಾಡಿಗೆ ತೆರಳಿ ಅಲ್ಲಿಂದ ಮರಳಿ ಕಾಪುವಿಗೆ ಬಂದು ಸಮಾಪನಗೊಂಡಿತು.
Kshetra Samachara
19/06/2022 09:39 pm