ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಆರ್ ಟಿಐ ಕಾರ್ಯಕರ್ತರ ಧರಣಿ: ಸ್ಥಳಕ್ಕೆ ಬಂದು ಭರವಸೆ ನೀಡಿದ ಡಿಸಿ

ಮಣಿಪಾಲ: ಹಲವು ಸಂಘಟನೆಗಳ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಯಿತು.

ಮುಖ್ಯವಾಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಈ ಧರಣಿ ನಡೆಯಿತು. ಈ ಮೊದಲು ಜಿಲ್ಲೆಯ ಆರ್ ಟಿ ಐ ಕಾರ್ಯಕರ್ತರು,ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕರ್ನಾಟಕ ರಾಷ್ಟ್ರ ಸಮಿತಿ,ಬ್ರಹ್ಮಾವರ ತಾಲೂಕು ನಾಗರಿತ ಹಿತ ರಕ್ಷಣಾ ಸಮಿತಿ ಮತ್ತು ಸಮಾನ ಮನಸ್ಕರ ಸಂಘಟನೆಗಳು ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದವು. ಆದರೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅನಿರ್ಧಿಷ್ಡಾವಧಿ ಧರಣಿ ಹಮ್ಮಿಕೊಳ್ಳಲಾಗಿತ್ತು.ರಾತ್ರಿ ಧರಣಿ ಸ್ಥಳಕ್ಕೆ ಅಗಮಿಸಿದ ಜಿಲ್ಲಾಧಿಕಾರಿಗಳು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಹಿನ್ನೆಲೆಯಲ್ಲಿ ಧರಣಿ ಸದ್ಯ ಕೈಬಿಡಲಾಗಿದ್ದು ಭರವಸೆ ಈಡೇರಿಸದಿದ್ದರೆ ಮತ್ತೆ ಧರಣಿ ಹಮ್ಮಿಕೊಳ್ಳುವುದಾಗಿ ಆರ್ ಟಿಐ ಕಾರ್ಯಕರ್ತರ ಸಂಘದ ಜಿಲ್ಲಾಧ್ಯಕ್ಷ ಸತೀಶ್ ಪೂಕಾರಿ ಬಾರ್ಕೂರು ಹೇಳಿದ್ದಾರೆ.

ಬೈಟ್ :

Edited By : Nagesh Gaonkar
Kshetra Samachara

Kshetra Samachara

21/06/2022 03:04 pm

Cinque Terre

6.08 K

Cinque Terre

0

ಸಂಬಂಧಿತ ಸುದ್ದಿ