ಮುಲ್ಕಿ: ಕೇಂದ್ರದ ಬಿಜೆಪಿ ಸರಕಾರ ಇಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ರಾಜಕೀಯ ವರ್ಚಸ್ಸು ತಗ್ಗಿಸುವ ದುರುದ್ದೇಶದಿಂದ ಅವರಿಗೆ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ನೇತೃತ್ವದಲ್ಲಿ ಮುಲ್ಕಿ ಬಸ್ಸು ನಿಲ್ದಾಣದ ಬಳಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬಳಿಕ ಪ್ರತಿಭಟನೆ ತಾರಕಕ್ಕೇರುತ್ತಿದ್ದಂತೆ ವಿಶೇಷ ಪೊಲೀಸ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಈ ಸಂದರ್ಭ ನೂಕಾಟ ತಳ್ಳಾಟ ನಡೆಯಿತು ಆದರೂ ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು ಇನ್ಸ್ಪೆಕ್ಟರ್ ಕುಸುಮಾಧರ ನೇತೃತ್ವದಲ್ಲಿ ಪರಿಸ್ಥಿತಿ ತಿಳಿಗೊಳಿಸಿದರು.
ಪ್ರತಿಭಟನೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಯೋಗೀಶ್ ಕೋಟ್ಯಾನ್, ಮಮತಾ ಗಟ್ಟಿ, ಮಂಜುನಾಥ ಕಂಬಾರ, ಅನಿಲ್ ಪೂಜಾರಿ, ದನರಾಜ ಸಸಿಹಿತ್ಲು, ಅಬ್ದುಲ್ ಅಜೀಜ್, ಚಂದ್ರಕುಮಾರ್, ಧರ್ಮಾನಂದ ಶೆಟ್ಟಿಗಾರ್, ರಕ್ಷಿತ್ ಕೊಳಚಿಕಂಬಳ ಮತ್ತಿತರರಿದ್ದರು.
Kshetra Samachara
21/06/2022 06:03 pm