ಮೂಡುಬಿದಿರೆ: ಕೇಂದ್ರ ಸರಕಾರ ಇ.ಡಿಯನ್ನು ಬಳಸಿಕೊಂಡು ವಿರೋಧ ಪಕ್ಷದ ಮುಖಂಡರುಗಳ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ನೇತೃತ್ವದಲ್ಲಿ ಮೂಡುಬಿದಿರೆಯಲ್ಲಿ ತಾಲೂಕು ಕಚೇರಿ ಮುತ್ತಿಗೆ ಸಭೆ ನಡೆಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅಭಯಚಂದ್ರ ಜೈನ್ ರಾಜ್ಯ ಹಾಗೂ ಕೇಂದ್ರದಲ್ಲಿ ಬ್ರಷ್ಟಾಚಾರ ಮಿತಿ ಮೀರುತ್ತಿದ್ದು ಬಿಜೆಪಿ ಪರವಾಗಿ ನಿಲ್ಲದ ವಿರೋಧ ಪಕ್ಷದ ನಾಯಕರುಗಳನ್ನು ಕೇಂದ್ರ ಸರಕಾರವು ಸದೆಬಡಿಯಲು ಪ್ರಯತ್ನಿಸುತ್ತಿರುವುದು ಎಂದರು. ಮಿಥುನ್ ರೈ ಮಾತನಾಡಿ ಬಿಜೆಪಿ ಸರ್ವಾಧಿಕಾರಿ ಧೋರಣೆಯನ್ನು ಕಾಂಗ್ರೆಸ್ ವಿರೋಧಿಸಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ಬ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಸಂಬಂದ್ಧ ಕಾನೂನುಗಳ ವಿರುದ್ದ ಹೆಚ್ಚಿನ ಪ್ರತಿಭಟನೆ ನಡೆಸಿಲಿರುವುದಾಗಿ ತಿಳಿಸಿದರು.
ಮಹಿಳಾ ಕಾಂಗ್ರೆಸ್ ಮುಖಂಡೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರೀಯಾ ಡಿ. ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ಸುರೇಶ್ ಪ್ರಭು, ಸುರೇಶ್ ಕೋಟ್ಯಾನ್, ಜೊಸ್ಸಿ ಮಿನೇಜಸ್, ಕೊರಗಪ್ಪ, ಪುರಂದರ ದೇವಾಡಿಗ, ಅಬ್ದುಲ್ ಕರೀಂ, ಸುಭಾಸ್ ಚಂದ್ರ ಚೌಟ, ಎಸ್. ಪ್ರವೀಣ್ ಕುಮಾರ್, ಅಭಿನಂದನ್ ಬಲ್ಲಾಳ್, ಚಂದ್ರಹಾಸ ಸನಿಲ್, ಮಹಮ್ಮದ್ ಅಸ್ಲಾಂ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಕಚೇರಿ ಮುತ್ತಿಗೆ ಸಂದರ್ಭ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
Kshetra Samachara
21/06/2022 06:22 pm