ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರು ದೇಶದ ಆಡಳಿತ ಚುಕ್ಕಾಣಿ ಹಿಡಿದು 8 ವರ್ಷ ಪೂರೈಸಿರುವ ಅಂಗವಾಗಿ ಬಿಜೆಪಿ "ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ" ಎನ್ನುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿದೆ.
ಬೆಳ್ತಂಗಡಿ ಮಂಡಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಬೆಳ್ತಂಗಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತ್ಯೋದಯ ಪರಿಕಲ್ಪನೆಯಲ್ಲಿ ಫಲಾನುಭವಿಗಳ ಸಮಾವೇಶ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧಕರಿಗೆ ಸನ್ಮಾನಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ಅಮೃತವರ್ಷಿಣಿ ಸಭಾಭವನ, ಧರ್ಮಸ್ಥಳದಲ್ಲಿ 8ನೇ ವರ್ಷದ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ನೂರಾರು ಮಂದಿ ಯೋಗಾಸನ ಮಾಡಿದರು.
Kshetra Samachara
21/06/2022 10:49 pm