ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಪಠ್ಯಪುಸ್ತಕ ಕೇಸರೀಕರಣ ನಿಲ್ಲಿಸಿ; ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ: ಪಠ್ಯಪುಸ್ತಕದ ಕೇಸರೀಕರಣ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ಬಸ್ ನಿಲ್ದಾಣ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, 70 ವರ್ಷಗಳಿಂದ ದೇಶವನ್ನು ಕಾಂಗ್ರೆಸ್ ಕಟ್ಟಿ ಬೆಳೆಸಿದೆ. ಆದರೆ, ಇವತ್ತು ಸಮಾಜದಲ್ಲಿ ಅಶಾಂತಿಯ ವಾತಾವರಣ ಕಾಣುತ್ತಿದ್ದೇವೆ. ದಿನಗಳ ಹಿಂದೆ ಮೈಸೂರು ಮತ್ತು ಬೆಂಗಳೂರಿಗೆ ಬಂದ ಪ್ರಧಾನಿಯವರು ಕೀಳು ಮಟ್ಟದ ಪ್ರಚಾರಕ್ಕಾಗಿ ಕಸ ಮತ್ತು ಬಾಟ್ಲಿ ಹೆಕ್ಕುತ್ತಾರೆ. ಇಂಥ ಪ್ರಧಾನಿಯವರಿಂದ ನಾವು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.

ರಾಜ್ಯ ಸರಕಾರ ರೋಹಿತ್ ಚಕ್ರತೀರ್ಥ ಎಂಬ ಅಯೋಗ್ಯನನ್ನು ಪಠ್ಯಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ಪವಿತ್ರವಾದ ಪಠ್ಯ‌ ಪುಸ್ತಕವನ್ನು ಕೇಸರೀಕರಣ ಮಾಡಲು ಹೊರಟಿದೆ. ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

23/06/2022 03:23 pm

Cinque Terre

4.54 K

Cinque Terre

0

ಸಂಬಂಧಿತ ಸುದ್ದಿ