ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಕೇಂದ್ರ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಪ್ರತಿಭಟನೆ

ಕಾಪು: ಪ್ರವಾದಿ ನಿಂದನೆ ಮಾಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ, ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರ ಮೇಲೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿರುವುದು ಮತ್ತು ಯುವ ಜನರ ಭವಿಷ್ಯಕ್ಕೆ ಮಾರಕವಾದ ಅಗ್ನಿಪಥ್ ಯೋಜನೆ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಬಿಜೆಪಿ ಸರಕಾರದ ಜನ ವಿರೋಧಿ ನೀತಿ, ಕೋಮು ಭಾವನೆ ಕೆರಳಿಸುವ ನಿರ್ಧಾರಗಳಿಂದಾಗಿ ದೇಶದ ಜನತೆ ತಲೆ ತಗ್ಗಿಸುವಂತಾಗಿದೆ. ಅಗ್ನಿ ಪಥ್ ಯೋಜನೆಯ ಮ‌ೂಲಕ ಸೇನೆಯ ಘನತೆಯನ್ನು ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಮುಖಂಡರ ಮೂಲಕವಾಗಿ ಧರ್ಮ ನಿಂದನೆ ನಡೆಸುತ್ತಿದೆ. ಇಂತಹ ಜನ ವಿರೋಧಿ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ,ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾಪು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾಧಿಕ್, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಕೆಪಿಸಿಸಿ ಕಾರ್ಯದರ್ಶಿ ಅಬ್ದುಲ್ ಗಫೂರ್, ಮೊದಲಾದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

25/06/2022 11:26 pm

Cinque Terre

6.18 K

Cinque Terre

0