ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ವಿವಿಧ ಸವಲತ್ತು ವಿತರಣೆ : ಶಾಸಕ ಲಾಲಾಜಿ ಮೆಂಡನ್

ಕಾಪು : ಪುರಸಭೆ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಅವರು, ಕಾಪು ಪುರಸಭಾ ವ್ಯಾಪ್ತಿಯಲ್ಲಿ ಆದ್ಯತೆಯ ಮೇರೆಗೆ ಮನೆ ನಿವೇಶನ ಮತ್ತು ಅನುದಾನ ಮಂಜೂರಾತಿ ಪತ್ರ ನೀಡಲಾಗಿದೆ. ದಿವ್ಯಾಂಗರ ಸಮಸ್ಯೆಗೆ ಸ್ಪಂಧಿಸಿ ಸಹಕಾರ ನೀಡಲಾಗುತ್ತಿದೆ. ಇದಕ್ಕಾಗಿ ಪುರಸಭೆಯ ಮೀಸಲು ಹಣವನ್ನು ಬಳಸಿಕೊಳ್ಳಲಾಗುತ್ತಿದ್ದು ಆದ್ಯತೆಯ ಮೇರೆಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಅಂಗವಿಕಲ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರತ್ನಾ ಸುವರ್ಣ,ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

28/06/2022 03:38 pm

Cinque Terre

3.52 K

Cinque Terre

0

ಸಂಬಂಧಿತ ಸುದ್ದಿ