ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತೀಸ್ತಾ ಸೆಟಲ್ವಾಡ್ ಬಂಧನ ವಿರೋಧಿಸಿ ಸಹಬಾಳ್ವೆಯಿಂದ ಪ್ರತಿಭಟನೆ

ಉಡುಪಿ: ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಗುಜರಾತ್ ಮಾಜಿ ಐಪಿಎಸ್ ಅಧಿಕಾರಿ ಶ್ರೀ ಕುಮಾರ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿಯ ಸಹಬಾಳ್ವೆ ಸಂಘಟನೆಯ ವತಿಯಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.

ನಗರದ ಹುತಾತ್ಮ ಸೈನಿಕ ಸ್ಮಾರಕದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ ಫಣಿರಾಜ್ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ ಪೀಠವೊಂದು ದೂರು ನೀಡಿದ ಅರ್ಜಿದಾರರನ್ನು ಬಂಧಿಸಬೇಕು ಎಂಬ ತೀರ್ಪನ್ನು ನೀಡಿದೆ. ನ್ಯಾಯಕ್ಕಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ತೀಸ್ತಾ ಸೆಟಲ್ವಾಡ್ ಅವರಿಗೆ ನರೇಂದ್ರ ಮೋದಿ ನೇತೃತ್ವದ ಸರಕಾರ, ಗುಜರಾತ್ ಪೋಲಿಸರು ನಿರಂತರವಾಗಿ ಒತ್ತಡವನ್ನು ಹೇರುತ್ತಾ ಬಂದಿದ್ದಾರೆ.ಇದೀಗ ಅವರ ಪ್ರಕರಣವನ್ನು ಎಟಿಎಸ್ ಗೆ ನೀಡಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಸಹಬಾಳ್ವೆ ಸಂಘಟನೆಯ ಮುಂದಾಳು ಅಮೃತ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

29/06/2022 07:31 pm

Cinque Terre

4.53 K

Cinque Terre

0

ಸಂಬಂಧಿತ ಸುದ್ದಿ