ಸುಳ್ಯ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರುಕುಟುಂಬ ಸಮೇತ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 12.30ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿ ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿದರು.
ಇಂದು ಕ್ಷೇತ್ರದಲ್ಲಿ ತಂಗಲಿರುವ ಅವರು ಸರ್ಪ ಸಂಸ್ಕಾರ ಪೂಜೆ ನೆರವೇರಿಸಲಿದ್ದಾರೆ. ದೇವಸ್ಥಾನದಲ್ಲಿ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋನಾವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kshetra Samachara
30/06/2022 06:16 pm