ಪುತ್ತೂರು: ಒಳನಾಡು ಮೀನುಗಾರಿಕೆ ಕುರಿತು ಕೃಷಿಕರಿಗೆ ಮಾಹಿತಿ ಕಾರ್ಯಾಗಾರ ಪುತ್ತೂರಿನ ಕುಂಬ್ರದ ನವೋದಯ ಸಭಾಂಗಣದಲ್ಲಿ ನಡೆಯಿತು.
ರಾಜ್ಯ ಮೀನುಗಾರಿಕೆ- ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ನಾನು ಮೀನುಗಾರಿಕೆ ಇಲಾಖೆ ಸಚಿವನಾದ ಬಳಿಕ ಒಳನಾಡು ಮೀನುಗಾರಿಕೆಗೂ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಮೀನುಗಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತೊಡಗಿಕೊಂಡಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನಿನ ಕೊರತೆ ಎದುರಾಗುತ್ತಿರುವ ಕಾರಣಕ್ಕೆ ಸರಕಾರ, ಮರಿ ಮೀನು ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗಿದೆ ಎಂದರು.
ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೀನು ಸಾಕಣೆ ಮಾಡುವ ಕೃಷಿಕನಿಗೆ ಮಾರುಕಟ್ಟೆ ವ್ಯವಸ್ಥೆಯನ್ನೂ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಅಲ್ಲದೆ, ಮೀನುಗಳನ್ನು ಸಂರಕ್ಷಿಸಿಡುವ ಶೀತಲೀಕರಣ ಘಟಕಗಳ ವ್ಯವಸ್ಥೆಯನ್ನೂ ಮಾಡುವ ಚಿಂತನೆ ಸರಕಾರದ ಮುಂದಿದೆ ಎಂದರು.
Kshetra Samachara
02/07/2022 04:02 pm