ಮುಲ್ಕಿ: ಯುವಕರು ಪಕ್ಷ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಪ್ರವೃತ್ತ ರಾಗಬೇಕು ಎಂದು ಮಾಜಿ ಸಚಿವ ಕೆ ಅಭಯ ಚಂದ್ರ ಹೇಳಿದರು. ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮುಲ್ಕಿ ಮೂಡುಬಿದ್ರೆ ಎನ್ ಎಸ್ ಯು ಐ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸೃಜನ್ ಜೆ ಅಂಚನ್ ರವರಿಗೆ ನೇಮಕಾತಿ ಆದೇಶ ಹಸ್ತಾಂತರಿಸಿ ಮಾತನಾಡಿದರು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ರಾಜ್ಯ ಎನ್ ಎಸ್ ಯು ಐ ಅಧ್ಯಕ್ಷ ಕೀರ್ತಿ ಗಣೇಶ್ , ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ , ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
03/07/2022 04:19 pm