ಸುಳ್ಯ: ಕರ್ನಾಟಕ ರಾಜ್ಯ ಸರಕಾರದ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಇಂಧನ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ಜುಲೈ 7 ರಂದು ದ.ಕ. ಹಾಗೂ ಕೊಡಗಿನ ಭೂ ಕಂಪನ ಬಾದಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರು ಸಂಪಾಜೆ, ತೊಡಿಕಾನ, ಅರಂತೋಡು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕಂದಾಯ ಸಚಿವರಾದ ಆರ್.ಅಶೋಕ್ ಅವರು ಸಂಪಾಜೆ, ಚೆಂಬು ಭಾಗಕ್ಕೆ ಭೂ ಕಂಪನ ಬಾದಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಸುಳ್ಯ ಬಿಜೆಪಿ ಕಚೇರಿ ಪ್ರಕಟಣೆ ತಿಳಿಸಿದೆ.
Kshetra Samachara
06/07/2022 06:08 pm