ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ, ಬೆಳ್ತಂಗಡಿ ಶಾಸಕರ ಬೆಂಬಲದಿಂದ ಅಕ್ರಮ ಮರಳುಗಾರಿಕೆ: ರಮಾನಾಥ ರೈ ಆರೋಪ

ಬಂಟ್ವಾಳ: ಅಕ್ರಮಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ವರ್ಗಾವಣೆಯಾಗಿದ್ದು, ಇದಕ್ಕೆ ಬಂಟ್ವಾಳ, ಬೆಳ್ತಂಗಡಿ ಶಾಸಕರೇ ಕಾರಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈಆರೋಪಿಸಿದ್ದಾರೆ.

ಬೆಳ್ತಂಗಡಿ ಹಾಗೂ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಿ.ಸಿ.ರೋಡ್ ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.

ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಬಂಟ್ವಾಳ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು, ಶಾಸಕರು ಈ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು. ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ, ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ, ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ ಬೋಳಂತೂರು, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಮುರಳೀಧರ ರೈ ಮಠಂತಬೆಟ್ಟು, ಪ್ರಸಾದ್ ಕೌಶಲ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಮಾನಾಥ ರೈ, ಮಹಮ್ಮದ್ ಬಡಗನ್ನೂರು, ಪದ್ಮನಾಭ ರೈ ಉಪಸ್ಥಿತರಿದ್ದರು.

ಐಕಾನ್- ಮರಳು ದಂಧೆಗೆ ಶಾಸಕರ ಬೆಂಬಲ?

Edited By : Nagesh Gaonkar
Kshetra Samachara

Kshetra Samachara

06/07/2022 06:57 pm

Cinque Terre

9.13 K

Cinque Terre

0

ಸಂಬಂಧಿತ ಸುದ್ದಿ