ಮಣಿಪಾಲ: ಕಲ್ಯಾಣ ಮಂಡಳಿಯ ಹಣ ದುರುಪಯೋಗ ಆಗುತ್ತಿದ್ದು, ಕಾರ್ಮಿಕ ಸಚಿವರು ಹಾಗೂ ಕಾರ್ಮಿಕ ಆಯುಕ್ತರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಇವತ್ತು ಪ್ರತಿಭಟನೆ ನಡೆಯಿತು.
ಉಡುಪಿ ಮಣಿಪಾಲದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು. ಮಳೆಯ ನಡುವೆಯೂ ನೂರಕ್ಕೂ ಮಿಕ್ಕಿ ಕಟ್ಟಡ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೊನೆಗೆ ಕಾರ್ಮಿಕ ಅಧಿಕಾರಿ ಕುಮಾರ್ ಅವರು ಜಿಲ್ಲಾಧಿಕಾರಿ ಪರವಾಗಿ ಮನವಿ ಸ್ವೀಕರಿಸಿದರು. ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಶೇಖರ ಬಂಗೇರಾ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸಹಿತ. ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.
Kshetra Samachara
07/07/2022 08:48 pm