ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏರಿದ ನೇತ್ರಾವತಿ ಜಲಮಟ್ಟ: ಶಾಸಕ ರಾಜೇಶ್ ನಾಯ್ಕ್ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಹರಿಯುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾನುವಾರ ಬೆಳಗ್ಗೆ 8.7 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ತಗ್ಗು ಪ್ರದೇಶಗಳಾದ ಬಡ್ಡಕಟ್ಟೆ, ಬಸ್ತಿಪಡ್ಪು, ಆಲಡ್ಕ ಪರಿಸರದಲ್ಲಿ ನೀರು ತುಂಬಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗೂಡಿನಬಳಿಯಲ್ಲಿ ನೇತ್ರಾವತಿ ನೀರಿನ ಮಟ್ಟ ಪರಿಶೀಲನೆ ನಡೆಸಿದರು.

ಗ್ರಾಮ ಲೆಕ್ಕಾಧಿಕಾರಿಗಳಾದ ನಾಗರಾಜ್, ವಿಜೇತ, ಸಿಬ್ಬಂದಿ ಸದಾಶಿವ ಕೈಕಂಬ, ರೂಪೇಶ್ ಬೆಂಜನಪದವು ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

10/07/2022 02:49 pm

Cinque Terre

3.84 K

Cinque Terre

0

ಸಂಬಂಧಿತ ಸುದ್ದಿ