ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಭೇಟಿ; "ಕೊರೆತ ತಡೆಗೆ ಸೀ ವೇವ್ ಬ್ರೇಕರ್ಸ್ ತಂತ್ರಜ್ಞಾನ"

ಉಳ್ಳಾಲ: ಇಂದು ಸಂಜೆ ಸುರಿಯುತ್ತಿದ್ದ ಧಾರಾಕಾರ ಮಳೆ ನಡುವೆ ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾಶ್ವತ ಪರಿಹಾರಕ್ಕಾಗಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ವೇವ್ ಬ್ರೇಕರ್ಸ್ ತಂತ್ರಜ್ಞಾನ ಇಲ್ಲೂ ಅಳವಡಿಸುವುದಾಗಿ ಹೇಳಿದರು.

ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಅವಲೋಕನ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಮಾತನಾಡಿದ ಸಿಎಂ, ಉಳ್ಳಾಲದಲ್ಲಿ ಈ ಬಾರಿ‌ 600 ಮೀ. ಕಡಲ್ಕೊರೆತ ಆಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆ ಇದೆ. ಕಡಲ್ಕೊರೆತ ತಡೆಗೆ ನಡೆಸಿದ್ದ ಎಡಿಬಿ ಕಾಮಗಾರಿ ಸರಿಯಾಗಿಲ್ಲ ಎಂಬ ಆರೋಪವಿದೆ.

ಸೀ ವೇವ್ ಬ್ರೇಕರ್ಸ್ ತಂತ್ರಜ್ಞಾನವನ್ನು ಈ ಪ್ರದೇಶದಲ್ಲೇ ಅಳವಡಿಸಲು ಅನುಮತಿ ನೀಡಲಾಗಿದೆ. ರಸ್ತೆ ಸಂಪರ್ಕ ಕಡಿತ ಆದಲ್ಲಿ ತಾತ್ಕಾಲಿಕವಾಗಿ ಜನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು. ಕಡಲ ತೀರದಲ್ಲಿ ಅಪಾಯದಲ್ಲಿರುವ ಮನೆಯವರನ್ನು ಶಿಫ್ಟ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸುಳ್ಯದಲ್ಲಿ ಭೂ ಕಂಪನದಿಂದ ಹಾನಿಯಾದ ಮನೆಗಳಿಗೆ ಭೇಟಿ ಕೊಟ್ಟಿದ್ದೇನೆ. ಭೂ ಕಂಪನದಿಂದ ಎಫೆಕ್ಟ್ ತುಂಬಾ ಆಗಿದೆ. ಭೂ ಕಂಪನದ ಬಗ್ಗೆ ಅಧ್ಯಯನಕ್ಕೆ 3- 4 ಸಂಸ್ಥೆಗೆ ಹೇಳಿದ್ದೇವೆ. ಅವರು ಅಧ್ಯಯನ ಮಾಡಿ‌ ಸಲಹೆ ಕೊಟ್ರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಕಡಲ್ಕೊರೆತ ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ, ಶಾಶ್ವತ ಪರಿಹಾರದ ಭರವಸೆ ನೀಡಿದರು. ಸ್ಥಳೀಯ ಶಾಸಕ ಯು.ಟಿ.ಖಾದರ್ ರಿಂದ ಸಮಸ್ಯೆ ಬಗ್ಗೆ ವಿವರಣೆ ಪಡೆದ ಬೊಮ್ಮಾಯಿ, ಕೆಲ ನಿಮಿಷವಷ್ಟೇ ಸಮಸ್ಯೆ ಆಲಿಸಿ ನೇರವಾಗಿ ಉಡುಪಿಗೆ ತೆರಳಿದರು.

Edited By : Nagesh Gaonkar
PublicNext

PublicNext

12/07/2022 10:42 pm

Cinque Terre

51.47 K

Cinque Terre

4

ಸಂಬಂಧಿತ ಸುದ್ದಿ