ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ಉಡುಪಿಗೆ ಆಗಮಿಸಿದ್ದಾರೆ. ಮಣಿಪಾಲದ ಕಂಟ್ರಿ ಇನ್ ಹೋಟೆಲ್‌ಗೆ ಸಿಎಂ ಆಗಮಿಸಿದ್ದು ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ನಾಳೆ( ಜು.13) ಬೆಳಿಗ್ಗೆ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಸಂಕೀರ್ಣ 'ರಜತಾದ್ರಿ'ಯಲ್ಲಿ ಮಂತ್ರಿಗಳು ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆ- ನೆರೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ. ಸಿಎಂಗೆ ಜಿಲ್ಲೆಯ ಮಂತ್ರಿಗಳು ಮತ್ತು ಶಾಸಕರು ಸಾಥ್ ನೀಡಲಿದ್ದಾರೆ.
Kshetra Samachara
12/07/2022 10:56 pm