ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯ‌ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ವೇಗ‌:ಕುಯಿಲಾಡಿ‌ ಸುರೇಶ್ ನಾಯಕ್

ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಜು.16ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು.

ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಬೂತ್ ಸಶಸ್ತೀಕರಣ, ಶಕ್ತಿ ಕೇಂದ್ರ ಪ್ರಮುಖರ ಸಭೆ ಹಾಗೂ ಮನೆ ಮನೆ ಬೇಟಿ ಅಭಿಯಾನ ನಡೆಯಲಿದೆ. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಂಘಟಿತ ಪ್ರಯತ್ನದ ಮೂಲಕ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಲು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತೀ ಮನೆಗಳಲ್ಲಿ ಅ.11ರಿಂದ ಅ.17ರ ವರೆಗೆ ರಾಷ್ಟ್ರ ಧ್ವಜವನ್ನು ಅರಳಿಸುವ ಮೂಲಕ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಗೌರವಿಸುವ ಕೇಂದ್ರ ಸರಕಾರದ 'ಹರ್ ಘರ್ ತಿರಂಗಾ' ಅಭಿಯಾನದ ಯಶಸ್ವಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಕುಯಿಲಾಡಿ ವಿನಂತಿಸಿದರು.

Edited By : PublicNext Desk
Kshetra Samachara

Kshetra Samachara

16/07/2022 06:23 pm

Cinque Terre

5.47 K

Cinque Terre

0

ಸಂಬಂಧಿತ ಸುದ್ದಿ