ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಕುಂಜೆ: ಕೈಗಾರಿಕೆಗಳಿಗೆ ಭೂಸ್ವಾಧೀನ ಇಲ್ಲ: ಶಾಸಕರ ಸ್ಪಷ್ಟನೆ

ಮುಲ್ಕಿ: ಕೈಗಾರಿಕೆಗಳಿಗೆ ಮುಲ್ಕಿ ಸಮೀಪದ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು ಗ್ರಾಮಗಳಲ್ಲಿ ಹಲವಾರು ಎಕರೆ ಭೂಸ್ವಾಧೀನ ಮಾಡಲು ನಿರ್ಧಾರ ಮಾಡಲಾಗಿತ್ತು. ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು.

ಈ ವಿಷಯದ ಗಂಭೀರತೆ ಅರಿತು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿರವರ ಬಳಿ ಚರ್ಚೆ ಮಾಡಿ ಕೃಷಿ ಭೂಮಿ ಉಳಿಸಿಕೊಡುವಂತೆ ಮನವಿ ಮಾಡಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.

ಈ ಬಗ್ಗೆ ಸ್ಪಂದಿಸಿದ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಯಾವುದೇ ರೀತಿಯ ಸರ್ವೇ ಇನ್ನಿತರ ಕೆಲಸಗಳನ್ನು ಮಾಡಬಾರದು ಎಂದು ಆದೇಶ ನೀಡಿದ್ದಾರೆ ಹಾಗೂ ಬಳ್ಕುಂಜೆ ಭಾಗದ ಗ್ರಾಮಸ್ಥರಲ್ಲಿ ಕೈಗಾರಿಕೆಗಳಿಗೆ ಬಲವಂತದ ಭೂ ಸ್ವಾಧೀನದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಎಂದು ಶಾಸಕರು ಮಾಧ್ಯಮದ ಮುಖಾಂತರ ಸ್ಪಷ್ಟನೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

16/07/2022 09:29 pm

Cinque Terre

7.86 K

Cinque Terre

0

ಸಂಬಂಧಿತ ಸುದ್ದಿ