ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಭಿವ್ಯಕ್ತಿ ಸ್ವಾತಂತ್ರ್ಯ ದಮನ, ಸರ್ವಾಧಿಕಾರಿ ಧೋರಣೆ ಖಂಡಿಸಿ ಪ್ರತಿಭಟನೆ!

ಉಡುಪಿ: ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ಮತ್ತು ಸರಕಾರಗಳ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ ಪ್ರತಿಭಟನಾ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೀರ್ ಹುಸೇನ್, ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಿದವರನ್ನು ವಿವಿಧ ಸೆಕ್ಷನ್ ಹಾಕಿ ಜೈಲಿಗೆ ಕಳುಹಿಸಲಾಗುತ್ತಿದೆ. ಇಂತಹ ಆತಂಕದ ವಾತಾವರಣ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೀವನವನ್ನು ನರವನ್ನಾಗಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಜನರ ಗಮನ ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಹಿಂದುಳಿದ ಸಮುದಾಯದ ವ್ಯಕ್ತಿಯೊಬ್ಬರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಅಲ್ಲದೆ ಅವರ ಆಯ್ಕೆ ದಿನದಂದೇ ಅಗತ್ಯ ವಸ್ತುಗಳಿಗೂ ಜಿಎಸ್‌ಟಿ ವಿಧಿಸಲಾಗಿದೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

19/07/2022 07:34 pm

Cinque Terre

5.22 K

Cinque Terre

1