ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್ ಭೇಟಿ

ಮಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿ ಪ್ರಸಾದ್ ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆ ಹಾಗೂ ನೆರೆಯಿಂದ ತೊಂದರೆಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗುರುಪುರದ ಮೂಳೂರು, ಗಂಜಿಮಠ, ಆದ್ಯಪಾಡಿ ಹಾಗೂ ಮೀನಕಳಿಯ ಕಡಲ್ಕೊರೆತ ಪ್ರದೇಶಗಳಿಗೂ ಭೇಟಿ ನೀಡಿದರು.

ಈ ಸಂದರ್ಭ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಮನೆ ಕಳೆದುಕೊಂಡ

ಕುಟುಂಬಗಳಿಗೆ ಪರಿಹಾರ ನೀಡುವಂತೆ ಸರಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ಸ್ಥಳೀಯ ಪಂಚಾಯತ್ ಸದಸ್ಯರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

19/07/2022 08:51 pm

Cinque Terre

11.54 K

Cinque Terre

0

ಸಂಬಂಧಿತ ಸುದ್ದಿ